ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರೋತ್ಸವ ಕುರಿತು ಸಂಯೋಜಕ ಎಂ.ಆರ್.ಹರೀಶ್‌ ಮಾತನಾಡಿದರು.
ಮೈಸೂರು ಸಿನಿಮಾ ಸೊಸೈಟಿ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಫೆ.3 ಮತ್ತು 4ರಂದು ‘ಪರಿದೃಶ್ಯ’ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಆಯೋಜಿಸಲಾಗಿದೆ ಎಂದು ಚಿತ್ರೋತ್ಸವದ ಸಂಯೋಜಕ ಎಂ.ಆರ್.ಹರೀಶ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಗೂ ಭಾರತೀಯ ಚಿತ್ರ ಸಾಧನದ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರೋತ್ಸವ ಆಯೋಜಿಸಲಾಗಿದ್ದು, ಫೆ3ರಂದು ಬೆಳಗ್ಗೆ 10 ಗಂಟೆಗೆ ಹಿರಿಯ ರಂಗಕರ್ಮಿ ಪ್ರಕಾಶ್ ಬೆಳವಾಡಿ ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ನಟಿ ಹರಿಪ್ರಿಯಾ, ಮುಕ್ತ ಉಪ ಕುಲಪತಿ ಡಾ. ಶರಣಪ್ಪ ಹಲಸೆ ಹಾಗೂ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಈ ಚಿತ್ರೋತ್ಸವಕ್ಕಾಗಿ ಈಗಾಗಲೇ ಕಿರುಚಿತ್ರಗಳ ಸ್ಪರ್ಧೆ ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ 20 ದೇಶಗಳಿಂದ 300ಕ್ಕೂ ಹೆಚ್ಚು ಕಿರುಚಿತ್ರ ಮತ್ತು ಸಾಕ್ಷ್ಯಚಿತ್ರಗಳು ಪ್ರದರ್ಶನಗೊಂಡಿದ್ದವು. ಅವುಗಳಲ್ಲಿ ಆಯ್ಕೆಯಾದ ಅತ್ಯುತ್ತಮ ಕಿರುಚಿತ್ರ, ಸಾಕ್ಷ್ಯಚಿತ್ರಗಳನ್ನು ಚಿತ್ರೋತ್ಸವದಲ್ಲಿ ಮತ್ತು ಶ್ರವಣದೋಷವುಳ್ಳ ಮಕ್ಕಳಿಗಾಗಿ
ಪ್ರದರ್ಶಿಸಲಾಗುತ್ತಿದೆ. ಶನಿವಾರ ಮೂಕ ವಿಶೇಷ ಮೂಕಿ ಚಿತ್ರ ಪ್ರದರ್ಶಿಸಲಾಗುವುದು. ಫೆ.4ರಂದು ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ
ನಿರ್ದೇಶಕ ಗಿರೀಶ್‌ ಕಾಸರವಳ್ಳಿ ಹಾಗೂ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ವಿಜೇತ ಚಿತ್ರಗಳಿಗೆ ಪ್ರಶಸ್ತಿಪ್ರದಾನ ಮಾಡಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಚಿತ್ರೋತ್ಸವದ ಸಹ ಸಂಯೋಜಕರಾದ ಪದ್ಮಾವತಿ ಎಸ್‌.ಭಟ್ ಹಾಗೂ ಜಿ.ಆರ್. ಚೇತನ್ ಇದ್ದರು.